6

Pocso | ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗೊತ್ತಾಗಿದ್ದು ಇಷ್ಟು.. ಗೊತ್ತಾಗದೇ ನಡೆದಿದ್ದು ಎಷ್ಟು?

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ಅವಧಿಯಲ್ಲಿ 44 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ( Pocso ) ನಡೆದಿದೆ. ಈ ಹಿಂದಿನ ಅಂಕಿ-ಸ0ಖ್ಯೆಗಳ ಲೆಕ್ಕಾಚಾರ ದೊರೆತರೆ ನಮ್ಮ ಮಕ್ಕಳು ಸುರಕ್ಷಿತವಾ? ಎಂಬ ಪ್ರಶ್ನೆ ಪಾಲಕರನ್ನು ಕಾಡುವುದು ಸಹಜ! S News  ಡಿಜಿಟಲ್

ಪಿಯು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳೇ ಅತ್ಯಧಿಕವಾಗಿ ಲೈಂಗಿಕ ದೌರ್ಜನ್ಯಕ್ಕೆ ( Pocso ) ಸಿಲುಕಿದ್ದಾರೆ. ದೌರ್ಜನ್ಯಕ್ಕೆ ಒಳಗಾದ ಮಕ್ಕಳು ಮೊದಲು ಸುಮ್ಮನಿದ್ದು, ಗರ್ಭ ಧರಸಿದ ನಂತರವೇ ಬೆಳಕಿಗೆ ಬಂದ ಪ್ರಕರಣಗಳು ಸಹ ವರದಿಯಾಗಿದೆ. ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಅತಿ ಹೆಚ್ಚು ಬಳಕೆ ಮಾಡುತ್ತಿರುವುದು ದೌರ್ಜನ್ಯಕ್ಕೆ ಮುಖ್ಯ ಕಾರಣ ಎಂದು ಗೊತ್ತಾಗಿದೆ. ಅಂಕಿ-ಸ0ಖ್ಯೆಗಳ ಪ್ರಕಾರ ರಾಜ್ಯದಲ್ಲಿ ಶೇ 70ರಷ್ಟು ಲೈಂಗಿಕ ದೌರ್ಜನ್ಯಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ನಡೆದಿದೆ. 18 ವರ್ಷದ ಒಳಗಿನವರೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಳವಳ ವ್ಯಕ್ತಪಡಿಸಿದೆ. S News  ಡಿಜಿಟಲ್

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ ತಿಪ್ಪೇಸ್ವಾಮಿ ಕೆ ಟಿ ನಡೆಸಿದ ಸಭೆ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸಭೆ ನಡೆಸಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ ತಿಪ್ಪೇಸ್ವಾಮಿ ಕೆ ಟಿ `ಪೋಕ್ಸೋ ಪ್ರಕರಣ ತಡೆಗೆ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಅಗತ್ಯ’ ಎಂದು ಪ್ರತಿಪಾದಿಸಿದರು. `ಮಕ್ಕಳ ಸುರಕ್ಷತೆ ಬಗ್ಗೆ ಪಾಲಕರು ನಿಗಾವಹಿಸಬೇಕು’ ಎಂದವರು ಕರೆ ನೀಡಿದರು.

`ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವುದು ಅನಿವಾರ್ಯ. ಕಾಲೇಜುಗಳಲ್ಲಿ ಪೊಕ್ಸೋ ಕಾಯಿದೆ ಬಗ್ಗೆ ತರಬೇತಿ ಆಯೋಜಿಸಬೇಕು’ ಎಂದು ಅವರು ಸೂಚಿಸಿದ್ದಾರೆ. `ವಿದ್ಯಾರ್ಥಿಗಳಿಗೆ ಸುರಕ್ಷಿತ ರೀತಿಯಲ್ಲಿ ಮೊಬೈಲ್ ಬಳಕೆ ಮಾಡುವ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಮನೆಗಳಲ್ಲಿ ಪೋಷಕರು ಜಾಗೃತಿ ಮೂಡಿಸಬೇಕು’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

S News  ಡಿಜಿಟಲ್

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    Leave a Reply

    Your email address will not be published. Required fields are marked *

    You cannot copy content of this page