ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಯ ಶಿಕ್ಷಕರು ಎಲ್ಲಡೆ ಪ್ರತಿಭಟಿಸುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿಯೂ ತಹಶೀಲ್ದಾರರ ಮೂಲಕ ಶಿಕ್ಷಕರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. `2006ರ ಪೂರ್ವದಲ್ಲಿ ಸೇವೆಗೆ ಸೇರಿಕೊಂಡು 2006ರ ನಂತರ ಅನುದಾನಕ್ಕೆ ಒಳಪಟ್ಟು ಕಾರ್ಯನಿರ್ವಹಿಸುತ್ತಿರುವಂತಹ ನೌಕರಿಗೆ ಹಳೆ ನಿಶ್ಚಿತ ಪಿಂಚಣಿ ಯೋಜನೆ ಜಾರಿ ಮಾಡಬೇಕು’ ಎಂಬುದು ಅವರ ಪ್ರಮುಖ ಬೇಡಿಕೆ.
Discussion about this post