ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾನಸ ಕೇಂದ್ರ ಸ್ಥಾಪಿಸಲು ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚನೆ ನೀಡಲಾಗಿದೆ.
`ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಮಹಿಳೆಯರಿಗಾಗಿ ಮಾನಸ ಕೇಂದ್ರ ಸ್ಥಾಪಿಸಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಒತ್ತಾಯಿಸಿದ್ದರು. ನ 11ರಂದು ಅವರು ಈ ಬಗ್ಗೆ ಮುಖ್ಯಮಂತ್ರಿ ಕಚೇರಿ ಸೇರಿ ಹಲವು ಇಲಾಖೆಗಳಿಗೆ ಪತ್ರ ಬರೆದಿದ್ದರು.
ಪ್ರಸ್ತುತ ಅವರ ಪತ್ರದ ಆಧಾರದಲ್ಲಿ ಮುಖ್ಯಮಂತ್ರಿ ಮುಖ್ಯಮಂತ್ರಿಯವರ ಅಧೀನ ಕಾರ್ಯದರ್ಶಿಗಳಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಿಗೆ ಪತ್ರ ರವಾನೆಯಾಗಿದೆ. ಅದರಲ್ಲಿ ಮಾನಸಿಕ ಮಹಿಳೆಯರಿಗೆ ಮಾನಸ ಕೇಂದ್ರ ಮಂಜೂರು ಮಾಡುವ ವಿಷಯವಾಗಿ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ.
26 ದಿನಗಳ ಒಳಗಾಗಿ ಈ ಬಗ್ಗೆ ಇಲಾಖೆಗೆ ನಿದರ್ಶನ ನೀಡಿದಕ್ಕಾಗಿ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದರು.