ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೂ ಒಂದೇ ಒಂದು ಹಕ್ಕಿ ಜ್ವರದ ಪ್ರಕರಣಗಳು ವರದಿಯಾಗಿಲ್ಲ. ಆದರೆ, ಹಕ್ಕಿ ಜ್ವರಕ್ಕಿಂತಲೂ ವಿದ್ಯುತ್ ಅವಘಡದಿಂದ ಸಾವನಪ್ಪಿದ ಪಕ್ಷಿಗಳ ಸಂಖ್ಯೆಯೇ ಇಲ್ಲಿ ಹೆಚ್ಚಿದೆ!
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 160 ಕೋಳಿ ಪಾರಂ’ಗಳಿವೆ. ಹಕ್ಕಿ ಜ್ವರದ ಆತಂಕದ ಹಿನ್ನಲೆ ಅಧಿಕಾರಿಗಳು ಈ ಪಾರಂ’ಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಅಲ್ಲಿ ಸಾವನಪ್ಪಿದ ಹಕ್ಕಿಗಳ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಆದರೆ, ಯಾವ ಹಕ್ಕಿಯೂ ಈ ಜ್ವರದಿಂದ ಸಾವನಪ್ಪಿದ ನಿದರ್ಶನಗಳು ಸಿಕ್ಕಿಲ್ಲ. ಬದಲಾಗಿ ಅಲ್ಲಲ್ಲಿ ವಿದ್ಯುತ್ ಅವಘಡದಿಂದಾಗಿ ಹಕ್ಕಿಗಳು ಸಾವನಪ್ಪಿದ ಉದಾಹರಣೆಗಳು ದೊರೆತಿದೆ.
`ಹಕ್ಕಿ ಜ್ವರವು ವೈರಸ್ನಿಂದ ಹರಡುವ ರೋಗವಾಗಿದೆ. ಇದು ಟರ್ಕಿ ಕೋಳಿ, ಗಿನಿ ಕೋಳಿ, ಬಾತುಕೋಳಿ, ಗೀಜಗ ಮುಂತಾದ ಪಕ್ಷಿಗಳಿಂದ ಬರುವ ಸಾಂಕ್ರಾಮಿಕ ಖಾಯಿಲೆ. ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಮ್ಮೆ ರೋಗಪೀಡಿತ ಹಕ್ಕಿಗಳ ಸಂಪರ್ಕದಿ0ದ ಮನುಷರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುಲಿದೆ. ರೋಗ ಪೀಡಿತ ಕೋಳಿ ಅಥವಾ ಹಕ್ಕಿಯ ಮಾಂಸವನ್ನು ಸರಿಯಾಗಿ ಬೇಯಿಸದೆ ತಿನ್ನುವುದರಿಂದ ಹಾಗೂ ಸೋಂಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಈ ರೋಗ ಹರಡುತ್ತದೆ. ಕೋಳಿ ಹಿಕ್ಕೆಗಳು ಕುಡಿಯುವ ನೀರಿನ ಜೊತೆ ಬೆರತಾಗಲೂ ರೋಗ ಹರಡುತ್ತದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
`ರೋಗ ಪೀಡಿತರಲ್ಲಿ ಜ್ವರ, ಕೆಮ್ಮು, ಶೀತ, ತಲೆನೋವು, ಗಂಟಲು ಕೆರೆತ, ನೆಗಡಿ, ಸ್ನಾಯುಗಳಲ್ಲಿ ನೋವು, ಆಯಾಸ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ವಾಂತಿ-ಭೇದಿಯ ಸಾಧ್ಯತೆಗಳಿವೆ. ಉಸಿರಾಟದಲ್ಲಿ ತೊಂದರೆ ಸಾಮಾನ್ಯ. ಈ ಲಕ್ಷಣಗಳು ಕಾಣಿಸಿದ ಕೂಡಲೇ ಹತ್ತಿರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಬೇಕು. ಹಕ್ಕಿಜ್ವರವು ಮುನ್ನೆಚರಿಕೆಯಿಂದ ತಡೆಯಬಲ್ಲ ಖಾಯಿಲೆಯಾಗಿದೆ’ ಎಂದು ತಜ್ಞರು ಹೇಳಿದ್ದಾರೆ.
ಇನ್ನೂ ಕೋಳಿ ಪಾರಂ’ಗೆ ಭೇಟಿ ನೀಡಿದ ಅಧಿಕಾರಿಗಳು ಹಕ್ಕಿ ಜ್ವರದ ಕುರಿತುವಹಿಸಬೇಕಾದ ಮುನ್ನಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾಮೂಹಿಕ ಹಕ್ಕಿಗಳ ಸಾವಿನ ಬಗ್ಗೆ ಅರಿವಿಗೆ ಬಂದ ತಕ್ಷಣ ಮಾಹಿತಿ ನೀಡುವಂತೆ ಕೋರಿಕೊಂಡಿದ್ದಾರೆ. `ಪಶು ಪಾಲನಾ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಪರಿಶೀಲಿಸಬೇಕು. ಸಾವಿನ ಕಾರಣ ಪತ್ತೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ ಸೋಮವಾರ ಸಭೆ ನಡೆಸಿ ಸೂಚನೆ ರವಾನಿಸಿದ್ದಾರೆ.