ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 1375 ಗಣೇಶ ವಿಗ್ರಹಗಳನ್ನು ಸ್ಥಾಪಿಸಲಾಗಿದ್ದು, ವಿವಿಧ ದಿನ ಅವುಗಳ ವಿಸರ್ಜನೆ ನಡೆಯಲಿದೆ. ಸಾವಿರಾರು ಜನರ ಸಮ್ಮುಖದಲ್ಲಿ ಗಣಪತಿ ವಿಗ್ರಹದ ಮೆರವಣಿಗೆ ಹಾಗೂ ವಿಸರ್ಜನೆ ನಡೆಯಲಿದ್ದು, ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯದ ಅಂಗಡಿಗಳನ್ನು ತೆರೆಯಬಾರದು ಎಂದು ಜಿಲ್ಲಾಡಳಿತ ಸೂಚಿಸಿದೆ.
ಲೋಕಾಯುಕ್ತರ ಜಿಲ್ಲಾ ಸಂಚಾರ
ಸೆ 25ರಂದು ಬೆಳಗ್ಗೆ 11 ಗಂಟೆಗೆ ಹಳಿಯಾಳಕ್ಕೆ ಲೋಕಾಯುಕ್ತ ಅಧಿಕಾರಿಗಳು ಬರಲಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ ಹಳಿಯಾಳ ತಹಶೀಲ್ದಾರ ಕಚೇರಿ ಸಭಾ ಭವನದಲ್ಲಿ ಲೋಕಾಯುಕ್ತರು ಜನರ ಅಹವಾಲು ಆಲಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ 08382- 295293, 220198, 222250, 222022, 229988ಗೆ ಸಂಪರ್ಕಿಸಿ.
ಕುರಿ ಸಾಕಾಣಿಕೆಗೆ ಉಚಿತ ತರಬೇತಿ
ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ರುಡ್ಸೆಟ್ ಸಂಸ್ಥೆಯ 10 ದಿನಗಳ ಕುರಿ ಸಾಕಾಣಿಕಾ ತರಬೇತಿ ಆಯೋಜಿಸಿದೆ.
ಸೆಪ್ಟೆಂಬರ್ 17ರಿಂದ ಈ ತರಬೇತಿ ನಡೆಯಲಿದೆ. ಆಸಕ್ತ 18 ರಿಂದ 45 ವರ್ಷ ವಯೋಮಾನದ ಕನ್ನಡದವರು ಇದಕ್ಕೆ ಅರ್ಜಿ ಸಲ್ಲಿಸಬಹುದು. ಆಧಾರ್ ಹಾಗೂ ಬಿಪಿಎಲ್ ಕಾರ್ಡ ಇದ್ದವರಿಗೆ ಆದ್ಯತೆ. ಉಚಿತ ಊಟ ಹಾಗೂ ವಸತಿ ವ್ಯವಸ್ಥೆ ನೀಡಿ ತರಬೇತಿ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಪ್ರಮಾಣ ಪತ್ರವೂ ಸಿಗಲಿದೆ.
ಮಾಹಿತಿಗೆ ಇಲ್ಲಿ ಫೋನ್ ಮಾಡಿ: 8105526792