ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬುಲೆರೋ ಪಿಕಪ್ ಜೊಯಿಡಾದ ಕುಂಬಾರವಾಡದಲ್ಲಿ ಪಲ್ಟಿಯಾಗಿದೆ. ಪರಿಣಾಮ ವ್ಯಕ್ತಿಯೊಬ್ಬರು ಸಾವನಪ್ಪಿದ್ದು, 10ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.
ಗುರುವಾರ ಮಧ್ಯಾಹ್ನದ ವೇಳೆ 15ಕ್ಕೂ ಅಧಿಕ ಕಾರ್ಮಿಕರನ್ನು ಬುಲೆರೋ ಪಿಕಪ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಕುಂಬಾರವಾಡದ ಡೊಣಪ ಬಳಿ ಆ ವಾಹನ ಚಾಲಕನ ನಿಯಂತ್ರಣ ತಪ್ಪಿತು. ವಾಹನ ಸಂಪೂರ್ಣವಾಗಿ ಪಲ್ಟಿಯಾಗಿದ್ದು, ಕಾರ್ಮಿಕರೆಲ್ಲರೂ ನೆಲಕ್ಕೆ ಅಪ್ಪಳಿಸಿದರು. ಈ ವೇಳೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಗಾಯಗೊಂಡರು. ಆಸ್ಪತ್ರೆಗೆ ಸಾಗಿಸುವ ಮುನ್ನ ಅವರು ಸಾವನಪ್ಪಿದರು.
ಅಪಘಾತದಲ್ಲಿ 10ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರನ್ನು ಜೊಯಿಡಾದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ವೈದ್ಯರು ಅವರ ಆರೈಕೆಯಲ್ಲಿ ತೊಡಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.