ಯುವನಿಧಿ ಯೋಜನೆಯ ಅರ್ಹ ಫಲಾನುಭವಿಗಳು ಮಾಸಿಕ ನಿರುದ್ಯೋಗ ಭತ್ಯೆ ಪಡೆಯಲು ಸೇವಾ ಸಿಂಧೂ ಪೋರ್ಟಲ್ನಲ್ಲಿ ಪ್ರತಿ ತಿಂಗಳು 25ನೇ ತಾರೀಖಿನ ಒಳಗಾಗಿ ಸ್ವಯಂ ಘೋಷಣೆ ಸಲ್ಲಿಸಬೇಕು.
ಕಳೆದ ತಿಂಗಳುಗಳಲ್ಲಿ ಸ್ವಯಂ ಘೋಷಣೆ ಮಾಡಲು ಸಾಧ್ಯವಾಗದೇ ಇರುವ ಫಲಾನುಭವಿಗಳು ಈ ತಿಂಗಳು ಜೂನ್ 25ರೊಳಗಾಗಿ ಸೇವಾ ಸಿಂಧೂ ಪೋರ್ಟಲ್ನಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ಮಾಡಲು ಅವಕಾಶವಿದೆ ಎಂದು ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
Discussion about this post